ಚಿತ್ರದುರ್ಗ : ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಶಿಕ್ಷಕನನ್ನು ತಳಕು ಠಾಣೆ ಪೊಲೀಸರು ಬಂಧಿಸಿದ್ದಾರೆ.
10ನೇ ತರಗತಿಯ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ್ದ ಆರೋಪದ ಮೇಲೆ ಶಿಕ್ಷಕ ಡಿಓ ರಾಜಣ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದ ಬಳಿಕ ತಳಕು ಠಾಣೆ ಪಿಎಸ್‌ಐ ಶಿವಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಗರ್ಭಿಣಿಯಾಗಿದ್ದ ವಿದ್ಯಾರ್ಥಿನಿಗೆ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಹೋಂನಲ್ಲಿ ಗರ್ಭಪಾತ ಮಾಡಿಸಲಾಗಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಆರೋಪಿಯ ಬಂಧನದ ನಂತರ, ನರ್ಸಿಂಗ್ ಹೋಂ ನಲ್ಲಿ ಗರ್ಭಪಾತ ಮಾಡಿಸಿದ ವೈದ್ಯೆ ಡಾ. ಶಂಕರ್ ಲಕ್ಷ್ಮಿ ಪರಾರಿಯಾಗಿದ್ದಾರೆ.
ಬಂಧನ ಭೀತಿಯಿಂದ ಓಡಿಹೋಗಿರುವ ವೈದ್ಯೆಯನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ಈ ಪ್ರಕರಣ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ



















