ಕಾರವಾರ: 2ನೇ ತರಗತಿ ವಿದ್ಯಾರ್ಥಿಯ ಬೆನ್ನಿನ ಮೇಲೆ ಬಾಸುಂಡೆ ಬರುವಂತೆ ಶಿಕ್ಷಕಿ ಥಳಿಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದ ಕಾಳನಕೊಪ್ಪದ ಶಾಲೆಯಲ್ಲಿ ನಡೆದಿದೆ.
ವಿದ್ಯಾರ್ಥಿ ಸರಿಯಾಗಿ ಅಭ್ಯಾಸ ಮಾಡುತ್ತಿಲ್ಲವೆಂದು ಸಿಟ್ಟಿಗೆದ್ದ ಶಿಕ್ಷಕಿ ಕೋಲಿನಿಂದ ಹೊಡೆದಿದ್ದಾರೆ. ವಿದ್ಯಾರ್ಥಿ ಶಾಲೆಯಿಂದ ಮನೆಗೆ ಬಂದ ಬಳಿಕ ಶಿಕ್ಷರು ಹೊಡೆದ ವಿಚಾರವನ್ನು ಪೋಷಕರಿಗೆ ತಿಳಿಸಿದ್ದಾನೆ. ವಿದ್ಯಾರ್ಥಿಯ ಪಾಲಕರು ಗ್ರಾಮದ ಪ್ರಮುಖರಿಗೆ ತೋರಿಸಿ ಕಣ್ಣೀರು ಹಾಕಿದ್ದು, ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.
ಶಾಲೆಗೆ ಬಿಇಒ ಸುಮಾ ಜಿ. ಭೇಟಿ ನೀಡಿ ಶಿಕ್ಷಕಿಗೆ ಎಚ್ಚರಿಕೆ ನೀಡಿದ್ದು, ಈ ಸಂಬಂಧಿಸಿದಂತೆ ಎಸ್‌ಡಿಎಂಸಿ ಸದಸ್ಯರು ಹಾಗೂ ಕುಟುಂಬಸ್ಥರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.