ಉತ್ತರ ಕನ್ನಡ : ಶಾಲೆ ವಿದ್ಯಾರ್ಥಿಗಳಿಂದ ಶಿಕ್ಷಕ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಶಿಕ್ಷಕ ಉದಯ್ ವಿದ್ಯಾರ್ಥಿಗಳಿಂದ ಶಾಲೆ ಮಕ್ಕಳಿಂದ ಕಾರು ತೊಳೆಸಿದ್ದಾರೆ. ಶಾಲಾ ಅವಧಿಯಲ್ಲೇ ತನ್ನ ಕಾರು ತೊಳೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ. ಮಕ್ಕಳು ಕಾರು ಕ್ಲಿನ್ ಮಾಡುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ಹಿಂದೆಯೂ ಕೂಡ ಶಿಕ್ಷಕ ಉದಯ್ ಇಂತಹ ಕೆಲಸ ಮಾಡಿಸಿದ್ದರು ಎಂದು ಹೇಳಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಕೂಡ ನೀಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಹಳಿಯಾಳ ಬಿಇಒ ಪ್ರಮೋದ ಮಹಾಲೆ ಈ ವಿಷಯದ ಬಗ್ಗೆ ವರದಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : NEW YEAR | ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್.. ಸೇವಾ ಅವಧಿ ವಿಸ್ತರಿಸಿದ BMRCL



















