ಬೆಂಗಳೂರು: ಕೌಟುಂಬಿಕ ಕಲಹ ಹಿನ್ನಲೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಾಬು ರೆಡ್ಡಿ ಹಾಗೂ ಶಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಪತಿ ಬಾಬು ರೆಡ್ಡಿಗೆ ಆರೋಗ್ಯ ಸಮಸ್ಯೆ ಇತ್ತು. ಇದೇ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ಕೂಡ ಮೂಡುತ್ತಿದೆ. ಮೊದಲು ಗಂಡ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಳಿಕ ಗಂಡ ಮೃತದೇಹ ಕಂಡು ಪತ್ನಿ ಸಹ 17 ನೇ ಫ್ಲೋರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಪತಿ ಭಾನು ಚಂದ್ರ ರೆಡ್ಡಿ , ಪತ್ನಿ ಸಾಜಿಯಾ ಇಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ರು. ಆದರೆ ದಂಪತಿಗಳಿಗೆ ಮಕ್ಕಳಿರಲಿಲ್ಲ. ಇದೇ ವಿಚಾರಕ್ಕೆ ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿದ್ದು, ಹಾಗಾಗಿ ಇಬ್ಬರೂ ಕೂಡ ಮಾನಸಿಕ ಒತ್ತಡ ಮತ್ತು ಮಾನಸಿಕ ಖಿನ್ನತೆಯಿಂದ ಬಳ ಲುತಿದ್ದರು ಎಂದು ಹೇಳಲಾಗುತ್ತಿದೆ.
ನೆನ್ನೆ ಸಹ ಇಬ್ಬರ ನಡುವೆ ಜಗಳ ಆಗಿದ್ದು, ಮೊದಲು ಪತಿ ಭಾನು ಚಂದ್ರ ರೆಡ್ಡಿ, ಪತ್ನಿ ಇಲ್ಲದಿರುವಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ. ಬಳಿಕ ಸಾಜಿಯಾ ಮನೆಗೆ ಬಂದು ನೋಡಿದ್ದಾಳೆ. ಈ ವೇಳೆ ಆಕೆಯೂ ಸಹ ಅಪಾ ರ್ಟ್ಮೆಂಟ್‌ನ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನಾ ಸಂಬಂಧ ಕೊತ್ತನೂರೂ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕೌಟುಂಬಿಕ ಕಲಹ -ಗೃಹಿಣಿ ಆತ್ಮಹತ್ಯೆ!



















