ಬೆಂಗಳೂರು: ಟೆಕ್ಕಿ ಆತುಲ್ ಸುಭಾಶ್ (Atul Subhash) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.
ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೆ ಬೆಂಗಳೂರು ನ್ಯಾಯಾಲಯ (Bengaluru Court) ಜಾಮೀನು ಮಂಜೂರು ಮಾಡಿದೆ. ನಿಖಿತಾ ಸಿಂಘಾನಿಯಾ, ನಿಶಾ ಸಿಂಘಾನಿಯ ಹಾಗೂ ಅನುರಾಗ್ ಸಿಂಘಾನಿಯಾಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದರು. ಆರೋಪಿಗಳು ಬಂಧನ ಪ್ರಶ್ನಿಸಿ, ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿದೆ.