ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಮನೆ ಮಾಡಿದೆ.
ಧರ್ಮಸ್ಥಳದ ನೇತ್ರಾವತಿಯ ಪಾಂಗಳ ಎಂಬಲ್ಲಿ ಮೂರು ಜನ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆದಿದೆ. ಪ್ರತಿಷ್ಠಿತ ಕುಟುಂಬದ ಮೇಲೆ ಸುಳ್ಳು ಆರೋಪ ಮಾಡಿದ್ದಾರೆಂದು ಹಲ್ಲೆ ಮಾಡಿದ್ದಾರೆನ್ನಲಾಗಿದ್ದು, ಇದನ್ನು ಖಂಡಿಸಿ ಹಲವರು ಹೋರಾಟ ನಡೆಸಿದ್ದಾರೆ.
ಈ ವೇಳೆ ಎರಡೂ ಗುಂಪಿನ ಜನರು ವಾಕ್ಸಮರ ನಡೆಸಿದ್ದಾರೆ. ಯುವಕರನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಲಾಠಿಚಾರ್ಜ್ ಕೂಡ ನಡೆದಿದೆ ಎನ್ನಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.



















