ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashoka) ಗೆ ಟೆನ್ಶನ್ ಶುರುವಾಗಿದೆ.
ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸುಪ್ರೀಂಕೋರ್ಟ್ (supreme court ) ಸೂಚನೆ ನೀಡಿದೆ. ಬಗರ್ ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪದ ಪ್ರಕರಣವನ್ನು ರದ್ದು ಕೋರಿ ಬಿಜೆಪಿ ನಾಯಕ ಆರ್.ಅಶೋಕ್ ಹೈಕೋರ್ಟ್ಗೆ ಸಲ್ಲಿಸಿದ್ದರು. ಆದರೆ, ಅಶೋಕ್ ಸಲ್ಲಿಸಿದ್ದ ಅರ್ಜಿ ವಜಾ ಮಾಡಿ, ಪ್ರಕರಣದ ತನಿಖೆ ನಡೆಸಲು 2018ರಲ್ಲಿ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಅಶೋಕ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿ ಮುಂದಿನ ವಿಚಾರಣೆ ಮುಂದೂಡಿದೆ.
ಬೆಂಗಳೂರು ಉತ್ತರ ತಾಲ್ಲೂಕು ಬಗರ್‌ಹುಕುಂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದರು. ಆ ವೇಳೆ ಸೋಮನಹಳ್ಳಿಯಲ್ಲಿ 8 ಎಕರೆ ಭೂಮಿಯನ್ನು ಅಕ್ರಮ ಮಂಜೂರಾತಿ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಅಶೋಕ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಎಫ್‌ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅಶೋಕ್ ಅರ್ಜಿ ಸಲ್ಲಿಸಿದ್ದರು.