ಕೊಪ್ಪಳ: ಮದುವೆ ಸಿದ್ಧತೆಯಲ್ಲಿ ತೊಡಗಿದ್ದ ಜೋಡಿಯೊಂದು ಪ್ರೀ ವೆಡ್ಡಿಂಗ್ ಫೋಟೊಶೂಟ್ ಮಾಡಿಸಿಕೊಂಡು ಮನೆಗೆ ವಾಪಸ್ ಬರುವ ವೇಳೆ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಗಂಗಾವತಿ ಬಳಿ ನಡೆದಿದೆ.
ಕರಿಯಪ್ಪ ಮಡಿವಾಳ (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತಪಟ್ಟ ಜೋಡಿ.ಇದೇ, ಡಿ. 21ರಂದು ಮದುವೆ ನಿಗದಿ ಆಗಿತ್ತು. ಹೀಗಾಗಿ ಭಾನುವಾರ ಇಬ್ಬರೂ ಪ್ರೀ ವೆಡ್ಡಿಂಗ್ ಶೂಟ್‌ಗೆ ಹೋಗಿದ್ದರು. ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಗುಡ್ಡ ಪ್ರದೇಶದಲ್ಲಿ ಶೂಟಿಂಗ್ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ, ಬೆಣಕಲ್ ಬಳಿಯೇ ಈ ಅವಘಡ ಸಂಭವಿಸಿದೆ.
ಮದುವೆಗೆ ಎರಡು ವಾರ ಮಾತ್ರ ಬಾಕಿ ಉಳಿದಿತ್ತು. ಹೊಸ ಜೀವನದ ಕನಸನ್ನು ಕಂಡಿದ್ದ ಈ ಜೋಡಿ ಸ್ಥಳದಲ್ಲೇ ಮಸಣ ಸೇರಿದ್ದಾರೆ. ಗಂಗಾವತಿ ಆಸ್ಪತ್ರೆ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ವೃದ್ಧರು ಸೇರಿ 7 ಮಂದಿಯನ್ನು ಗಾಯಗೊಳಿಸಿದ ಹುಚ್ಚುನಾಯಿ | ಬೆಚ್ಚಿಬಿದ್ದ ಸ್ಥಳೀಯರು!



















