ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66ರ ಮಾನೀರು ದೇವಸ್ಥಾನದ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೊಲೆರೊ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಬೊಲೆರೊ ಚಾಲಕ ಹಾಗೂ ಬಸ್‌ನಲ್ಲಿದ್ದ ಏಳು ಜನ ಗಾಯಗೊಂಡಿದ್ದಾರೆ.
ಬೊಲೆರೊ ವಾಹನ ಚಾಲಕ ಕಾರವಾರದ ಡೇವಿಡ್ ಪಾಸ್ಕಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕುಮಟಾದಿಂದ ಕಾರವಾರದ ಕಡೆಗೆ ತೆರಳುತ್ತಿದ್ದ ಬೊಲೆರೊ ವಾಹನಕ್ಕೆ, ಗೋಕರ್ಣದ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ | ನಿಂತಿದ್ದ ಬೋರ್ವೆಲ್ ಲಾರಿಗೆ ಬೊಲೆರೋ ಡಿಕ್ಕಿ.. ಓರ್ವ ಸಾವು, 6 ಮಂದಿಗೆ ಗಂಭೀರ ಗಾಯ!



















