ಹಾವೇರಿ : ಟಾಟಾ ಏಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ನಡೆದಿದೆ.
ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ!


















