ಬೀದರ್ ಜಿಲ್ಲೆಯ ಹುಮನಾಬಾದ್ ರಸ್ತೆಯಲ್ಲಿನ ಕಾರಂಜಾ ಜಲಾಶಯದ ಬಳಿ ಟ್ರ್ಯಾಕ್ಟರ್ ಹಾಗೂ ಗೂಡ್ಸ್ ವಾಹನದ ಮಧ್ಯೆ ಭೀಕರ ಅಪಘಾತ ನಡೆದಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೀದರ್ ಮೂಲದ ಮಾರುತಿ, ಅರ್ಜುನ್ ಗಾಯಗೊಂಡಿದ್ದಾರೆ. ಗೂಡ್ಸ್ ವಾಹನ ಚಾಲಕ ಅರ್ಜುನ್ ಕಾಲು ಮುರಿದಿದೆ.
ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾಲ್ಕಿ ತಾಲೂಕಿನ ಧನ್ನೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ.