ಚಿತ್ರದುರ್ಗ: ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಾಸಲು ಬಳಿ ಕಳೆದ ರಾತ್ರಿ ಸಂಭವಿಸಿದೆ.
ಕಿರಣ್(25), ಅರುಣ್(32), ಗಿರಿರಾಜ್(46) ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಹನುಮಂತಪ್ಪ (32) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಾಯಕೊಂಡದಲ್ಲಿ ಅಡಿಕೆ ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಕಲ್ಲವ್ವ ನಾಗತಿಹಳ್ಳಿಯವರಾಗಿದ್ದಾರೆ. ಈ ಅವಘಡದಲ್ಲಿ ಒಂದೇ ಗ್ರಾಮದ ನಾಲ್ವರು ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇನ್ನು ಈ ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನಾ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: 53 ಮಂದಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!



















