ಚಿತ್ರದುರ್ಗ : ಕಾರೊಂದು ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಬಳಿ ನಡೆದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಐವರು, ಕಾರಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ರಾಯರ ದರ್ಶನ ಮುಗಿಸಿ ಮಂತ್ರಾಲಯದಿಂದ ಕುಣಿಗಲ್‌ಗೆ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ. ಕಾರಿನ ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಲ್ಲಿದ್ದ ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ (38), ಗಂಗಾಧರ್ (35),ಲೋಹಿತ್ (40) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಇನ್ನು ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕನ ಬದಿಯಲ್ಲಿ ಕುಳಿತಿದ್ದವರ ತಲೆ ಕಟ್ ಆಗಿದ್ದು, ಉಳಿದ ಇಬ್ಬರು ಗಂಭಿರವಾಗಿ ಗಾಯಗೊಂಡು ಚಳ್ಳಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!



















