ಹಾಸನ : ಹಾಸನಾಂಬೆ ದೇವಿ ದರ್ಶನ ಪಡೆದು ವಾಪಾಸ್ ಬೈಕ್‌ನಲ್ಲಿ ಬರುತ್ತಿದ್ದವರಿಗೆ ಇನ್ನೋವಾ ಕಾರು ಡಿಕ್ಕಿಯಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲಿನಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಒಬ್ಬ ಯುವತಿಯ ಸ್ಥಿತಿ ಗಂಭೀರವಾಗಿದೆ. ಈ ಕುರಿತು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓರ್ವ ಯುವತಿ ಐಸಿಯುಗೆ ದಾಖಲು
ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಬಸವರಾಜು, ಅನು (19), ಛಾಯಾ (20) ಹಾಸನಾಂಬೆಯ ದರ್ಶನ ಮಾಡಲು ಬಂದಿದ್ದರು. ದರ್ಶನ ಮುಗಿಸಿ ಒಂದೇ ಬೈಕ್‌ನಲ್ಲಿ ಬರುತ್ತಿದ್ದ ಮೂವರು ಕಗ್ಗಲಿಕಾವಲು ಫಾರೆಸ್ಟ್ ಬಳಿ ಅಪಘಾತಕ್ಕೊಳಗಾಗಿದ್ದಾರೆ.
ಬಸವರಾಜು ಹಾಗೂ ಅನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಛಾಯಾ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು, ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆ್ಯಕ್ಟಿವ್ ಹೋಂಡಾಗೆ ಡಿಕ್ಕಿ ಹೊಡೆದು ನಂತರ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮೊಹಮ್ಮದ್ ಶಾಹಿದ್‌ಗೂ ಗಂಭೀರ ಗಾಯಗಳಾಗಿವೆ.