ಚಿತ್ರದುರ್ಗ: ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಭೀಕರ ಘಟನೆಯೊಂದು ನಡೆದಿದೆ.
ಈ ಘಟನೆ ಚಿತ್ರದುರ್ಗ “(Chitradurga) ಜಿಲ್ಲೆಯ ಚಳ್ಳಕೆರೆ(Challakere) ತಾಲೂಕಿನ ಹೆಗ್ಗೆರೆ (Hegger) ಗ್ರಾಮದ ಹತ್ತಿರ ನಡೆದಿದೆ. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾವನ್ನಪ್ಪಿದವರನ್ನು ತಿಮ್ಮಣ್ಣನಹಳ್ಳಿಯ ಶಂಕರಿಬಾಯಿ (65), ಕುಮಾರನಾಯ್ಕ್ (46), ಶ್ವೇತಾ (38) ಎಂದು ಗುರುತಿಸಲಾಗಿದೆ. ಗಾಯಗೊಡವರನ್ನು ಕೂಡಲೇ ಚಳ್ಳಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ.
ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದಿದ್ದರಿಂದಾಗಿ ಅದು ಪಲ್ಟಿಯಾಗಿರುವುದರಿಂದಾಗಿ ಈ ಘಟನೆ ಸಂಭವಿಸಿದೆ. ಚಳ್ಳಕೆರೆ ಪೊಲೀಸ್ ಠಾಣೆ (Challakere Police Station) ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.