ಕರಬುರಗಿ: ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಯೇಷಾ(70), ಅಜ್ಮೆರಾ (30), ಅಜ್ಮೇರಾ ಮಗಳು ಜೈನಬ್ (2) ಸಾವನ್ನಪ್ಪಿರುವ ದುರ್ದೈವಿಗಳು ಎನ್ನಲಾಗಿದೆ. ಕಲಬುರಗಿಯ ಅಫಜಲಪುರ ಗೊಬ್ಬುರ್ ಹತ್ತಿರ ಈ ಘಟನೆ ನಡೆದಿದೆ.
ಸಂಬಂಧಿಕರ ಮಗುವಿನ ಜವಳ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ ಹೈದ್ರಾಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿ ಒಂದೇ ಕುಟುಂಬದ 8 ಜನ ಸೇರಿದಂತೆ ಐವರು ಮಕ್ಕಳು ಪ್ರಯಾಣ ನಡೆಸುತ್ತಿದ್ದರು. ಗೊಬ್ಬರ್ ಗ್ರಾಮದ ಬಳಿ ಕಾರಿಗೆ ಅಡ್ಡ ಬಂದ ನಾಯಿ ಉಳಿಸಲು ಹೋಗಿ ಅಪಘಾತ ಸಂಭವಿಸಿದೆ. ಈ ಕುರಿತು ದೇವಲಗಾನಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.