ಹುಬ್ಬಳ್ಳಿ: ಕಾರು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ನಗರದ (Hubballi) ನೂಲ್ವಿ ಕ್ರಾಸ್ ಬಳಿ ನಡೆದಿದೆ. ವರೂರು(Varur) ಗ್ರಾಮದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕ್ವಿಡ್ ಕಾರು ವೇಗವಾಗಿ ಬಂದು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ.
ಸಾವನ್ನಪ್ಪಿದವರನ್ನು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎನ್ನಲಾಗಿದೆ. ಗಾಯಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.