ಕೋಲಾರ : ಟಿಟಿ ವಾಹನ ಡಿಕ್ಕಿಯಾಗಿ ಬೈಕ್ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸುಣ್ಣಕಲ್ಲು ಕ್ರಾಸ್ನಲ್ಲಿ ನಡೆದಿದೆ. ರಾಮಾಂಜಲು(36), ಕಲಾವತಿ(27) ಮೃತ ದುರ್ದೈವಿಗಳು.
ಮೃತರು ಆಂಧ್ರದ ಅನ್ನಮಯ್ಯ ಜಿಲ್ಲೆಯ ಯರಂವಾರಪಲ್ಲಿ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ವಗ್ರಾಮದಿಂದ ಬೆಂಗಳೂರಿಗೆ ಕೆಲಸಕ್ಕೆ ತೆರಳುವ ವೇಳೆ ದುರಂತ ಸಂಭವಿಸಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,, ಪ್ರಕರಣ ದಾಖಲಿಸಿದ್ದಾರೆ.