ಉತ್ತರ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ 10 ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಪ್ರದೇಶದ ಝಾನ್ಸಿಯ ಆಸ್ಪತ್ರೆಯಲ್ಲಿ ನಡೆದಿದೆ. ಅಲ್ಲದೇ, ಘಟನೆಯಲ್ಲಿ ಇನ್ನೂ 16 ಮಕ್ಕಳು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದು, ಇಡೀ ದೇಶವೇ ಆ ಮಕ್ಕಳು ಬದುಕಿ ಬರಲಿ ಎಂದು ಪ್ರಾರ್ಥಿಸುತ್ತಿದೆ.
ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಆಕ್ಸಿಜನ್ ಕಾನ್ಸೆಂಟ್ರೇಟರ್ ಒಳಗೆ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. NICUನಲ್ಲಿ ಒಟ್ಟು 54 ಮಕ್ಕಳು ದಾಖಲಾಗಿದ್ದರು. ಅನಾಹುತದಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ. ಇದರಲ್ಲಿ 7 ಮಕ್ಕಳನ್ನು ಪತ್ತೆ ಮಾಡಲಾಗಿದೆ. ಈ ಕಾರಣಕ್ಕೆ ಮಕ್ಕಳ ಡಿಎನ್‌ಎ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.
ಸಾವನ್ನಪ್ಪಿರುವ ಶಿಶುಗಳ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಲಾಗಿದೆ. ಬೆಂಕಿ ಅನಾಹುತದಿಂದ ಗಾಯಗೊಂಡಿರುವ ಮಕ್ಕಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ.