ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಟ್ಟಹಾಸ ಇನ್ನೂ ನಿಲ್ಲುತ್ತಿಲ್ಲ. ಹಲವೆಡೆ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗುತ್ತಿವೆ. ಹಲವೆಡೆ ಪ್ರವಾಹ ಉಂಟಾಗಿ, ಗುಡ್ಡ ಕುಸಿದು, ಸಾಕಷ್ಟು ಅವಾಂರಗಳನ್ನು ಸೃಷ್ಟಿಸಿದೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿ ಜನರು ಸಂಕಷ್ಟ ಪಡುವಂತಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಜು. 31ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜುಲೈ 31 ರಿಂದ ಅಗಸ್ಟ್ 1 ರ ವರೆಗೂ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಜುಲೈ 31ರಂದು ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, N.R.ಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾದ ಹಿನ್ನಲೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ತಹಶೀಲ್ದಾರ್ಗಳು ಆದೇಶಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ ತಹಶೀಲ್ದಾರ್ ಜಕ್ಕನಗೌಡರ್ ರಜೆ ಘೋಷಿಸಿದ್ದಾರೆ. ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಕೂಡ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿದ್ದಾರೆ. ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲಾಡಳಿತ ಜಿಲ್ಲೆಯಲ್ಲಿ ಮುಂದಿನ 2 ದಿನ ರೆಡ್ ಅಲರ್ಟ್ ಘೋಷಿಸಿ, ಗುಡ್ಡ-ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಈ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಡಿಸಿ ವೆಂಕಟರಾಜಾ ಆದೇಶಿಸಿದ್ದಾರೆ. ಉತ್ತರ ಕನ್ನಡದ ಹಲವು ಗ್ರಾಮಗಳು ಮಳೆಯಿಂದಾಗಿ ನಡುಗಡ್ಡೆಯಂತಾಗಿವೆ. ನದಿ, ಹಳ್ಳ-ಕೊಳ್ಳಗಲು ತುಂಬಿ ಹರಿಯುತ್ತಿವೆ.