ಭೀಕರ ಸರಣಿ ಅಪಘಾತವೊಂದು ನಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತಾಳೇಕೆರೆ ಹತ್ತಿರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಲಾರಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಲಾರಿಯು ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿಯು ಕಾರಿನ ಮೇಲೆ ಬಿದ್ದಿದ್ದರಿಂದಾಗಿ ಕಾರು ಅಪ್ಪಚ್ಚಿ ಆಗಿದೆ.
ಚಾಲಕನ ನಿಯಂತ್ರಣ ತಪ್ಪಿದ್ದರಿಂದಾಗಿ ಈ ದುರ್ಘಟನೆ ಸಂಭವಿಸಿದೆ. 6 ಜನ ಲಾರಿಯ ಕೆಳಗೆ ಸಿಲುಕಿ ಅಪ್ಪಚ್ಚಿಯಾಗಿದ್ದಾರೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಸೇರಿದಂತೆ ಪೊಲೀಸರು ಭೇಟಿ ನೀಡಿದ್ದಾರೆ. ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ಯತ್ನಿಸುತ್ತಿದ್ದಾರೆ.