ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ (Pahalgam Terror Attack) ಪ್ರವಾಸಕ್ಕೆಂದು ತೆರಳಿದ್ದ ಜನರ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ 25ಕ್ಕೂ ಹೆಚ್ಚು ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೆರಳಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇನ್ನೂ ಖಚಿತವಾಗಿಲ್ಲ. ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಫೋನ್ ಮಾಡಿ ಮಾಹಿತಿ ಪಡೆದಿದ್ದಾರೆ. ಆದಷ್ಟು ಬೇಗ ಕಾಶ್ಮೀರಕ್ಕೆ ತೆರಳಿ ಅಲ್ಲಿನ ಪರಿಸ್ಥಿತಿ ಅವಲೋಕಿಸುವಂತೆ ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ನೆರವಾಗುವಂತೆ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಸಂಜೆ ಉನ್ನತ ಮಟ್ಟದ ಭದ್ರತಾ ಪರಿಶೀಲನೆ ನಡೆಸಲು ಸಚಿವ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಶ್ರೀನಗರಕ್ಕೆ ತೆರಳಿದ್ದಾರೆ.
ಪ್ರವಾಸಿಗರ ಮೇಲೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ಶ್ರೀನಗರಕ್ಕೆ ತೆರಳಿದ್ದಾರೆ.