ಬೆಂಗಳೂರು: ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ (Pahalgam Terror Attack) ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ 20ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕಾರಿಗಳ ಸಭೆ ನಡೆಸಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ, ಘಟನೆ ಖಂಡಿಸಿದ್ದಾರೆ.
ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾತನಾಡಿ, ಘಟನೆ ಕುರಿತು ನಾನು ಸಿಎಂ ಜೊತೆಗೆ ಚರ್ಚಿಸಿದ್ದೇನೆ. ಕರ್ನಾಟಕದ ಹಿರಿಯ ಅಧಿಕಾರಿಯನ್ನ ಕಳುಹಿಸಿದ್ದೇವೆ. ಕನ್ನಡಿಗರನ್ನ ವಾಪಸ್ ತರಲು ಎಲ್ಲ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.