ಶ್ರೀನಗರ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ರಿಯಾಸಿ ಭಯೋತ್ಪಾದನಾ ದಾಳಿ ಪ್ರಕರಣಕ್ಕೆ (Reasi Terror Attack Case) ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮೊದಲ ಆರೋಪಿಯನ್ನು ಬಂಧಿಸಿದ್ದಾರೆ. ಆದರೆ, ಈತ ಮಾಸ್ಟರ್ ಮೈಂಡ್ ಆಲ್ಲ. ಈ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ರಿಯಾಸಿಯ ಹಿರಿಯ ಪೊಲೀಸ್ ಅಧೀಕ್ಷಕ ಮೋಹಿತ್ ಶರ್ಮಾ ಹೇಳಿದ್ದಾರೆ.
ಆರೋಪಿ ಹಕೀಮ್ ದಿನ್ ರಾಜೌರಿ ನಿವಾಸಿ. ಈ ದಾಳಿಯಲ್ಲಿ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಒದಗಿಸಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಜೂನ್ 9ರಂದು ಪೌನಿ ಪ್ರದೇಶದ ತೇರಿಯಾತ್ ಗ್ರಾಮದಲ್ಲಿ ಶಿವ ಖೋರಿ ಗುಹೆ ದೇಗುಲದಿಂದ ರಿಯಾಸಿ ಜಿಲ್ಲೆಯ ಕತ್ರಾಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯಲಾಗುತ್ತಿದ್ದ ಸಂದರ್ಭದಲ್ಲಿ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಘಟನೆಯಲ್ಲಿ 9 ಜನರು ಸಾವನ್ನಪ್ಪಿ, 33 ಜನ ಗಾಯಗೊಂಡಿದ್ದರು. ಈ ದಾಳಿಗೆ ದೇಶದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಪ್ರಕರಣದ ತಿಖೆಗೆ ಇಳಿದಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
