“ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಡಾಮಂಡಲವಾಗಿದ್ದಾರೆ.
ಗುಂಡಿನ ದಾಳಿ ನಡೆಸಿರುವ ವಿಚಾರ ತಿಳಿದು ಆಘಾತವಾಯಿತು. ಪ್ರವಾಸಿಗರ ಪೈಕಿ ಶಿವಮೊಗ್ಗ ಮೂಲದ ಓರ್ವ ಕನ್ನಡಿಗ ಸಾವನ್ನಪ್ಪಿದ್ದು, ಅವರ ಮೃತದೇಹವನ್ನು ತರಲು ಸರ್ಕಾರದಿಂದ ಸಕಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಕಾಶ್ಮೀರದಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರನ್ನು ಸಂಪರ್ಕಿಸಿ, ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಈಗಾಗಲೇ ಪೊಲೀಸ್ ಅಧಿಕಾರಿಗಳ ತಂಡವೊಂದನ್ನು ಕಳುಹಿಸಲಾಗಿದೆ. ಮೃತರ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸುತ್ತೇನೆ ಎಂದಿದ್ದಾರೆ.