ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟಿರುವ ಘಟನೆ ನಡೆದಿದೆ. ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಸ್ರು ಅಲಿಯಾಸ್ ನಸ್ರುಲ್ಲಾ ಎಂಬ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಗಾಂಜಾ ಪ್ರಕರಣದಲ್ಲಿ ಬಂಧಿಸಲು ಪೊಲೀಸರು ತೆರಳಿದ್ದ ಸಂದರ್ಭದಲ್ಲಿ, ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ. ಹೀಗಾಗಿ ಆತ್ಮರಕ್ಷಣೆಗಾಗಿ ಆತನ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಇತ್ತೀಚೆಗೆ 4.1 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದ ಪೊಲೀಸರು, ನಾಲ್ವರನ್ನು ಬಂಧಿಸಿದ್ದರು. ಪ್ರಕರಣದಲ್ಲಿ ನಸ್ರುಲ್ಲಾ ತಲೆ ಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಆತನನ್ನು ಬಂಧಿಸಲು ಪೊಲೀಸರು ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ಕಂಟ್ರಿ ಮೇಡ್ ಪಿಸ್ತೂಲು ಮತ್ತು ಡ್ರ್ಯಾಗರ್ ನಿಂದ ಪೊಲೀಸರ ಮೇಲೆ ಹಲ್ಲೆಗೆ ಆರೋಪಿ ಮುಂದಾಗಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ನಸ್ರು ಕಾಲಿಗೆ ಪಿಎಸ್ಐ ಚಂದ್ರಶೇಖರ್ ಗುಂಡು ಹಾರಿಸಿದ್ದಾರೆ. ಇನ್ನು ಕೆಲವು ಪ್ರಕರಣಗಳಲ್ಲಿ ಆರೋಪಿ ಪೊಲೀಸರಿಗೆ ಬೇಕಾಗಿದ್ದ. ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.