ಬೆಂಗಳೂರು : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ರೆಡ್‌ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ಬೆಂಗಳೂರಿನ ಬಾಗಲೂರು ಬಳಿ ನಡೆದಿದೆ.
ಬಂಧಿತರನ್ನು ಶ್ರೀಜಿತ್ ಹಾಗೂ ಜುನೀಲ್ ಎಂದು ಗುರುತಿಸಲಾಗಿದೆ. ಇವರು ದ್ವಿಚಕ್ರ ವಾಹನದಲ್ಲಿ ಸಿ.ಎಂ.ಆರ್. ಕಾಲೇಜು ಸಮೀಪ ತೆರಳುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಆರೋಪಿಗಳಿಂದ ಸುಮಾರು 56 ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಅಂದಾಜು 5 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.
ಈ ಕಾರ್ಯಾಚರಣೆಯನ್ನು ಬಾಗಲೂರು ಪೊಲೀಸರು ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
ಇದನ್ನೂ ಓದಿ : ಶಾರ್ಟ್ ಪಿಚ್ ಎಸೆತಕ್ಕೆ ಹೆದರುತ್ತಿದ್ದ ಆಟಗಾರ ಈಗ ಆಲ್ರೌಂಡರ್.. ದುಬೆ ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಧೋನಿ ಸಲಹೆ!


















