ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ (Contractor Sachin Suicide Case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ವಿರುದ್ಧದ ಆರೋಪಕ್ಕೆ ಯಾವುದೇ ಆಧಾರವಿಲ್ಲ. ಹೀಗಾಗಿ ರಾಜೀನಾಮೆ ಪಡೆಯಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ವರದಿ ಬಂದ ಮೇಲೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಯಾವುದೇ ಎವಿಡೆನ್ಸ್ ಇಲ್ಲದೆ ರಾಜೀನಾಮೆ ಪಡೆಯಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ಈ ವೇಳೆ ಸಂಪುಟ ಪುನರ್ ರಚನೆಯ ಕುರಿತು ಪರೋಕ್ಷ ಸುಳಿವು ನೀಡಿದ ಅವರು, ಸಂಪುಟ ಪುನರ್ ರಚನೆ ಕುರಿತು ಹೈಕಮಾಂಡ್ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.
ಸಿ.ಟಿ. ರವಿ ಪ್ರಕರಣದ ಕುರಿತು ಮಾತನಾಡಿದ ಅವರು, ಈಗಾಗಲೇ ಸಿ.ಟಿ. ರವಿ ಪ್ರಕರಣವನ್ನು ಸಿಐಡಿಗೆ ನೀಡಿದ್ದೇವೆ. ಅವರು ಹೇಳಿರುವ ಕುರಿತು ಎಫ್ ಎಸ್ ಎಲ್ ರಿಪೋರ್ಟ್ ಬರಬೇಕು. ಮಹಿಳೆಗೆ ಅವಮಾನ ಆಗುವ ರೀತಿಯಲ್ಲಿ ಮಾತಾಡಿದ್ದಾರೆ ಅಂತ ಆರೋಪ ಇದೆ. ಈ ಆರೋಪದ ಆಧಾರದಲ್ಲಿ ಎಫ್ ಐಆರ್ ಆಗಿದೆ. ಅದೂ ಕೂಡ ಸಿಐಡಿಗೆ ರೆಫರ್ ಆಗಿದೆ ಎಂದಿದ್ದಾರೆ.