ರಾಮನಗರದ ಹಳೇ ಬೆಂ.ಮೈ.ಹೆದ್ದಾರಿಯಲ್ಲಿರುವ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಸದ ರಾಶಿ ತುಂಬಿ ತುಳುಕುತ್ತಿದೆ. ಕಚೇರಿಗೆ ಪ್ರತಿದಿನ ನೂರಾರು ಮಂದಿ ಓಡಾಡುತ್ತಿರುತ್ತಾರೆ. ಆದರೆ, ಅಲ್ಲಿನ ಜಿಲ್ಲಾಧಿಕಾರಿ ಮಾತ್ರ ಕಂಡು ಕಾಣದ ರೀತಿ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಸದ ರಾಶಿ ತುಂಬಿದ್ದು, ಗಬ್ಬು ನಾರುತ್ತಿದೆ. ಸ್ಥಳಕ್ಕೆ ಭೇಟಿ ನೀಡಿರುವ ಕರುನಾಡ ಸೇನೆಯ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ ಕಸವನ್ನ ತೆರವು ಮಾಡಲು ಒತ್ತಾಯಿಸಿದ್ದಾರೆ.
ಕರುನಾಡ ಸೇನೆ ಜಿಲ್ಲಾಧ್ಯಕ್ಷ ಮಾತನಾಡಿ, ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಊಟ, ತಿಂಡಿ ಮಾಡಿ ಅಲ್ಲಲ್ಲೇ ಬಿಸಾಡಿರುವುದರಿಂದ ಗಬ್ಬು ನಾರುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆದಷ್ಟು ಬೇಗ ಇದನ್ನು ತೆರವು ಮಾಡಬೇಕೆಂದು ಒತ್ತಾಯಿಸಿದರು.