ಉತ್ತರ ಕನ್ನಡ : ಮುಂಡಗೋಡದಲ್ಲಿ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಜಮೀರ್ ಅಹ್ಮದ್ ದರ್ಗಾವಾಲೆ ಎಂಬ ವ್ಯಕ್ತಿಯನ್ನು ದುಷ್ಕರ್ಮಿಗಳು ಕ್ರೂರವಾಗಿ ಕೊಲೆ ಮಾಡಿದ್ದಾರೆ.
ಪಟ್ಟಣದ ಖಾಸಗಿ ಹೊಟೇಲ್‌ನಲ್ಲಿ ನಡೆದ ಘಟನೆಯಲ್ಲಿ, ನಾಲ್ವರು ದುಷ್ಕರ್ಮಿಗಳು ಮೊದಲು ಕಾರದ ಪುಡಿ ಎರಚಿ ಬಳಿಕ ಕತ್ತು ಸೀಳಿ, ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಮೃತ ವ್ಯಕ್ತಿ ಪೈನಾನ್ಸ್ ವ್ಯವಹಾರ ನಡೆಸುತ್ತಿದ್ದನೆಂಬ ಮಾಹಿತಿ ಲಭ್ಯವಾಗಿದೆ. ಕೊಲೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ಸಾಗಿಸಿದ್ದಾರೆ.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕೊಲೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ. ಸ್ಥಳಕ್ಕೆ ಎಸ್ಪಿ ದೀಪನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಮದುವೆ ಮಂಟಪಗಳಲ್ಲಿ ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದ್ದ ‘ಪಲ್ಸರ್ ಬಾಬು’ ಬಂಧನ!



















