ಬೆಂಗಳೂರು: ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಈ ಘಟನೆ ಸಪ್ತಗಿರಿ ಆಸ್ಪತ್ರೆಯ ಮುಂಭಾಗದಲ್ಲಿರುವ ಮನೆಯೊಂದರಲ್ಲಿ ನಡೆದಿದೆ. ಮನೆಯ ಸಂಪ್ ನಲ್ಲಿ ಯುವತಿಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಸಂಪ್ ಗೆ ಎಸೆದಿರುವ ಸಂಶಯ ವ್ಯಕ್ತವಾಗಿದೆ.
ಸಂಪ್ ನಲ್ಲಿ ಅರೆನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಸೋಲದೇವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 30 ವರ್ಷದ ಯುವತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಈ ಘಟನೆ ಕಳೆದ ಎರಡು ದಿನಗಳ ಹಿಂದೆಯೇ ನಡೆದಿರಬಹುದು ಎನ್ನಲಾಗಿದೆ. ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವತಿಯ ಬಲಗೈಯಲ್ಲಿ ಚಂದ್ರಮ್ಮ ಎಂದು ಬರೆದಿರುವ ಟ್ಯಾಟೂ ಕೂಡ ಇದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.