ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಡಲತೀರದಲ್ಲಿ ಪ್ರವಾಸಿಗರಿದ್ದ ಬೋಟ್ ಪಲ್ಟಿಯಾಗಿರುವ ಘಟನೆಯೊಂದು ನಡೆದಿದೆ. ಆದರೆ, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ನಗರಕ್ಕೆ ಸಾಕಷ್ಟು ಪ್ರವಾಸಿಗರು ಆಗಮಿಸಿದ್ದರು. ಆ ವೇಳೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿದ್ದ ಬೋಟ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೀಗಾಗಿ ಇಂಜಿನ್ ಸ್ಥಗಿತವಾಗಿದೆ. ಬಳಿಕ ಸಮುದ್ರದ ಭಾರೀ ಅಲೆಗೆ ಸಿಲುಕಿ ಸಮುದ್ರದ ದಡಕ್ಕೆ ಹತ್ತಿರ ಇರುವಾಗಲೇ ಬೋಟ್ ಪಲ್ಟಿಯಾಗಿದೆ. ಪ್ರವಾಸಿಗರನ್ನು ಅಲ್ಲಿನ ಗಾರ್ಡ್ ಸಿಬ್ಬಂದಿ ಸುರಕ್ಷತವಾಗಿ ದಡಕ್ಕೆ ಕರೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.



















