ಹಾವೇರಿ : ಬೆಳೆದ ಬೆಳೆಯಲ್ಲಿ ನಷ್ಟ ಅನುಭವಿಸಿ ಸಾಲದ ಒತ್ತಡದಿಂದ ರೈತೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹಾವೇರಿ ಜಿಲ್ಲೆಯ ಗುತ್ತಲ ಗ್ರಾಮದಲ್ಲಿ ನಡೆದಿದೆ.
ಮಾಲತೇಶ್ ಹನುಮಂತಪ್ಪ ಗೊರವರ್ (40) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ಗುತ್ತಲ ಗ್ರಾಮದ ಕೆರೆಗೆ ಹೋಗುವ ದಾರಿಯಲ್ಲಿರುವ ರೇಷ್ಮೆ ಮನೆಯಲ್ಲಿ ಅವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಾಲತೇಶ್ ಅವರು ರೇಷ್ಮೆ ಬೆಳೆಯನ್ನು ಬೆಳೆದಿದ್ದು, ಇತ್ತೀಚೆಗೆ ಬೆಳೆಯಲ್ಲಿ ಭಾರೀ ನಷ್ಟ ಅನುಭವಿಸಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ಹಾಗೂ ಫೈನಾನ್ಸ್ ಸಂಸ್ಥೆಗಳಿಂದ ಸುಮಾರು 10 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಬೆಳೆ ಕೈಕೊಟ್ಟ ಪರಿಣಾಮ ಸಾಲದ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಗ್ಯಾಸ್ ಅಭಾವವನ್ನೇ ಬಂಡವಾಳ ಮಾಡಿಕೊಂಡ ಧುರುಳರು



















