ಉಡುಪಿ: ಈಜಲು ಸಮುದ್ರಕ್ಕೆ ಇಳಿದಿದ್ದ ಮೂವರು ನೀರು ಪಾಲಾಗಿರುವ ಘಟನೆ ನಡೆದಿದೆ.
ಕುಂದಾಪುರ (Kundapura) ಹತ್ತಿರದ ಕೋಡಿ ಬೀಚ್ (Kodi Beach)ನಲ್ಲಿ ಈ ಘಟನೆ ನಡೆದಿದೆ. ಕುಟುಂಬ ಸಮೇತರಾಗಿ ಮೂವರು ಸಮುದ್ರಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮೂವರು ಯುವಕರು ನೀರಿಗೆ ಇಳಿದಿದ್ದಾರೆ. ಆದರೆ, ಮೇಲೆ ಬರಲು ಆಗದೆ, ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಲ್ಲದೇ, ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಂಪಾರು ಐದು ಸೆಂಟ್ ನಿವಾಸಿ ದಾಮೋದರ್ ಪ್ರಭು ಎಂಬುವರ ಮಗ ಧನರಾಜ್ (23) ಈಗಾಗಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಮಗ ಧನುಷ್ (20) ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಹೋದರನ ಪುತ್ರ ದರ್ಶನ್ (18) ಸಮುದ್ರ ಪಾಲಾಗಿದ್ದಾರೆ. ಆದರೆ, ಇದುವರೆಗೂ ಪತ್ತೆಯಾಗಿಲ್ಲ.
ಈ ಮೂರು ಜನರು ಸಹೋದರರಾಗಿದ್ದು, ಮೃತನಾಗಿರುವ ಧನರಾಜ್ (23) ವಿಪ್ರೋ ದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಗಂಭೀರವಾಗಿರುವ ಧನುಷ್ ಇಂಜಿನಿಯರಿಂಗ್ ಓದುತ್ತಿದ್ದ. ದರ್ಶನ್ (18) ಕುಂದಾಪುರ ಜ್ಯೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ನ್ನಲಾಗಿದೆ. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.