ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಸೇತುವೆ ಮೇಲಿಂದ ಹಳ್ಳಕ್ಕೆ ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲ್ಲೂಕಿನ ಅಣಜಿಗೆರೆ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಐದಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ದಾವಣಗೆರೆಯಿಂದ ಅರಸೀಕರೆ ಕಡೆ ಖಾಸಗಿ ಬಸ್ ಹೊರಟಿತ್ತು. ದಾರಿ ಮಧ್ಯೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಂದಕಕ್ಕೆ ಬಿದ್ದಿದೆ.
ಗಾಯಗೊಂಡವರನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅರಸೀಕರೆ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.