ಸಿಂಧು ನದಿಗೆ ಬಸ್ ಉರುಳಿದ ಪರಿಣಾಮ 26 ಜನ ಸಾವನ್ನಪ್ಪಿರುವ ಘನಟೆ ನಡೆದಿದೆ.
ಪಾಕಿಸ್ತಾನದ ಉತ್ತರ ಗಿಲ್ಗಿಟ್ ಬಾಲ್ಟಿಸ್ತಾನ್ ಎಂಬಲ್ಲಿ ಈ ಘಟನೆ ನಡೆದಿದೆ. ಮದುವೆ ಮನೆಯಿಂದ ಜನರನ್ನು ಕರೆ ತರುತ್ತಿದ್ದ ಬಸ್ ನದಿಗೆ ಉರುಳಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಈ ಬಸ್ 28 ಜನರನ್ನು ಕರೆದುಕೊಂಡು ಹೋಗುತ್ತಿತ್ತು ಎನ್ನಲಾಗಿದೆ.
ಕೂಡಲೇ ಸ್ಥಳೀಯರು ಕಾರ್ಯಾಚರಣೆ ನಡೆಸಿದ್ದಾರೆ. ಹೀಗಾಗಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನುಳಿದ 26 ಜನ ಸಾವನ್ನಪ್ಪಿದ್ದಾರೆ.
ಘಟನೆಗೆ ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಸಂತಾಪ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ್ ದಲ್ಲಿ ಅಪಘಾತ ಸಾಮಾನ್ಯ ಎನ್ನುವಂತಾಗಿದೆ. ಕೆಟ್ಟ ಹವಾಮಾನ, ಕೆಟ್ಟ ರಸ್ತೆಗಳು, ಓವರ್ ಲೋಡ್ ಗಳಿಂದ ಆಗಾಗ ಅಲ್ಲಿ ಅಪಘಾತಗಳು ಸಂಭವಿಸುತ್ತಲೇ ಇವೆ.