ವಿಜಯನಗರ : ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮೋರಿಗೇರಿ ಕ್ರಾಸ್ ಸಮೀಪ ಸಾರಿಗೆ ಬಸ್‌ವೊಂದು ರಸ್ತೆ ಬದಿ ತಗ್ಗು ಪ್ರದೇಶಕ್ಕೆ ಉರುಳಿದ ಘಟನೆ ನಡೆದಿದೆ. ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಆಕ್ಸಲ್ ಬ್ಲೇಡ್ ಕಟ್ ಆಗಿದ್ದೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಹಗರಿಬೊಮ್ಮನಹಳ್ಳಿ ಕಡೆಗೆ ಬರುತ್ತಿದ್ದ ಸಾರಿಗೆ ಬಸ್‌ನಲ್ಲಿ ಸುಮಾರು 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಮಾರ್ಗಮಧ್ಯೆ ಮೋರಿಗೇರಿ ಕ್ರಾಸ್ ಬಳಿ ತಲುಪಿದಾಗ ಬಸ್‌ನ ಆಕ್ಸಲ್ ಬ್ಲೇಡ್ ಏಕಾಏಕಿ ಕಟ್ ಆಗಿದ್ದು, ಬಸ್ ರಸ್ತೆ ಬದಿಯ ತಗ್ಗು ಪ್ರದೇಶಕ್ಕೆ ಉರುಳಿದೆ.
ಚಾಲಕ ತೋರಿದ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಬಸ್ ಸಂಪೂರ್ಣ ನಿಯಂತ್ರಣ ತಪ್ಪದಂತೆ ಚಾಲಕ ಅದನ್ನು ಮರದ ಕಡೆಗೆ ವಾಲಿಸಿದ್ದು, ಪರಿಣಾಮ ರಸ್ತೆ ಬದಿ ತಗ್ಗು ಪ್ರದೇಶಕ್ಕೆ ಉರುಳಿದರೂ ದೊಡ್ಡ ದುರಂತ ಸಂಭವಿಸಿಲ್ಲ.
ಅಪಘಾತದ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.
ಇದನ್ನೂ ಓದಿ : ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!



















