ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಚಿವ ಸಂಪುಟದ ಸಂದರ್ಭದಲ್ಲಿ ಜಾತಿ ಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ತೀರ್ಮಾನಸಲಾಗಿದೆ. ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂದಿಡಲು ನಿರ್ಧರಿಸಲಾಗಿದೆ.
ಇತ್ತೀಚೆಗಷ್ಟೇ ಸಚಿವ ಸಂಪುಟದಲ್ಲೇ ಜಾತಿ ಗಣತಿ(Caste census)ವರದಿ ಮಂಡನೆಯಾಗಲಿದೆ ಎಂಬ ಚರ್ಚೆಗಳು ಶುರುವಾಗಿದ್ದವು. ಈ ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ಮಾಡುವುದಿಲ್ಲ. ಬದಲಾಗಿ ಮುಂದಿನ ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಲ್ಲದೇ, ಮಂಡ್ಯದಲ್ಲಿ ಕೃಷಿ ತೋಟಗಾರಿಕೆ(Agriculture Horticulture)ಇಂಟಿಗ್ರೇಟೆಡ್ ವಿವಿ ಸ್ಥಾಪನೆ, ಕೃಷಿ ತೋಟಗಾರಿಕೆ ಇಂಟಿಗ್ರೇಟೆಡ್ ವಿವಿ ಸ್ಥಾಪನೆ, 5ನೇ ರಾಜ್ಯ ಹಣಕಾಸು ಆಯೋಗದ ಅವಧಿ ವಿಸ್ತರಣೆ ಸೇರಿದಂತೆ 35 ವಿಷಯಗಳನ್ನು ಚರ್ಚೆ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ರೇಷನ್ ಕಾರ್ಡ್ ಇರುವವರಿಗೆ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಎಂಆರ್ಐ ಸ್ಕ್ಯಾನ್, ಸಿಟಿ ಸ್ಕ್ಯಾನ್ ಮಾಡಲು ನಿರ್ಧರಿಸಲಾಗಿದೆ. ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ BBMP ವ್ಯಾಪ್ತಿಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಅಸ್ತು. 413 ಕೋಟಿ ರೂ. ಅನುಮೋದಿಸಲಾಗಿದೆ.
ಮಹಾನಗರ ಪಾಲಿಕೆಯ ಒಟ್ಟು 13 ಹೆರಿಗೆ ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದೆ. 10 ಮಹಾನಗರ ಪಾಲಿಕೆ, 24 ನಗರಪಾಲಿಕೆಗಳಲ್ಲಿ ಒಂದು ಚಿತಾಗಾರಕ್ಕೆ 4 ಕೋಟಿ ರೂ. ವೆಚ್ಚದಂತೆ 126 ಕೋಟಿ ರೂ. ವೆಚ್ಚದಲ್ಲಿ ಚಿತಾಗಾರ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. 10 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.