ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರಗುಡದ ಬಳಿ ಭೀಕರ ಕಾರು ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸ್ವಿಫ್ಟ್ ಕಾರು ರಸ್ತೆ ಮಧ್ಯೆಯಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲೇ ಕಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದಿದೆ.
ಸಂಕೇಶ್ವರ ಪಟ್ಟಣದ ನಿವಾಸಿ ಸೌರಭ ಕೊರಾಡೆ ಅವರಿಗೆ ಸೇರಿದ ಕಾರು ಇದಾಗಿದ್ದು, ಅಪಘಾತದ ವೇಳೆ ಕಾರು ಚಾಲನೆ ಮಾಡುತ್ತಿದ್ದ ಸೌರಭ ಅವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಮಹಾರಾಷ್ಟ್ರದ ಗಡಹಿಂಗ್ಲಜ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಹೊತ್ತಿ ಉರಿಯುತ್ತಿದ್ದ ಕಾರಿನ ಬೆಂಕಿಯನ್ನು ನಂದಿಸಿದರು. ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನಾ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : 1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!



















