ಬಳ್ಳಾರಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಸಚಿವರು, ಘಟನೆಗೆ ಸಂಬಂಧಿಸಿದಂತೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಐವಿ ಫ್ಲ್ಯೂಯೆಡ್ ಬಗ್ಗೆ ಅನುಮಾನವಿತ್ತು. ಹೀಗಾಗಿ ಲ್ಯಾಬ್ ನಲ್ಲಿ ಟೆಸ್ಟ್ ಮಾಡಲಾಗಿತ್ತು. ಲ್ಯಾಬ್ ನಲ್ಲಿ ಟೆಸ್ಟ್ ಬಳಿಕ ಐವಿ ಬಳಕೆ ನಿಷೇಧ ಮಾಡಲಾಗಿದೆ ಎಂದಿದ್ದಾರೆ.
327 ಬಾಣಂತಿಯರ ಸಾವು ಆಡಿಟ್ ಆಗಲಿದೆ. ಬಾಣಂತಿಯರ ಸಾವಿನ ಹಿಂದಿನ ಸತ್ಯ ಗೊತ್ತಾಗಬೇಕಿದೆ. ವಿರೋಧ ಪಕ್ಷವಾಗಿ ನೀವು ಪ್ರತಿಭಟನೆ ಮಾಡುವುದು ಸರಿಯಿದೆ.
ಆದರೆ, ಇದು ಭಾವನಾತ್ಮಕ, ಮಾನವೀತೆ ವಿಚಾರ. ಸದನದಲ್ಲಿ ಈ ವಿಚಾರ ಚರ್ಚೆ ಮಾಡುತ್ತೇವೆ. ಸಾವುಗಳ ತಡೆಗೆ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಇದು ಪ್ರತಿಭಟಿಸುವ ವಿಚಾರವಲ್ಲ. ಎಲ್ಲರೂ ಕೂತು ಪರಿಹಾರ ಕಂಡುಕೊಳ್ಳುವ ವಿಚಾರ ಎಂದು ವಿಪಕ್ಷಗಳಿಗೆ ಕಿವಿ ಮಾತು ಹೇಳಿದ್ದಾರೆ.