ಬೆಳಗಾವಿ: ಬಳ್ಳಾರಿಯಲ್ಲಿ (Ballari) ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಾಣಂತಿಯರ ಸಾವಿಗೆ ಆರ್ ಎಲ್ ಎಸ್ ಐವಿ ಗ್ಲುಕೋಸ್ ಕಾರಣ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ನಗರದಲ್ಲಿನ ಬಿಮ್ಸ್ ಆಸ್ಪತ್ರೆಯ ಮೇಲೆ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ದಾಳಿ ವೇಳೆ ಹತ್ತಾರು ಬಾಕ್ಸ್ ಗಳಲ್ಲಿ ಆರ್ ಎಲ್ ಎಸ್ ಐವಿ ಗ್ಲುಕೋಸ್ ಪತ್ತೆಯಾಗಿದೆ. ಪಿಬಿಪಿ ಸಂಸ್ಥೆ ಸರಬರಾಜು ಮಾಡಿರುವ ಐವಿ ಗ್ಲುಕೋಸ್ ಬಾಕ್ಸ್‌ಗಳು ಇವು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದ್ದು, 8 ಜನ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ.