ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಈ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ಮನಮೋಹನ್ ಸಿಂಗ್ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.
ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಶುಕ್ರವಾರ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿ, ಸ್ಮಾರಕಕ್ಕೆ ಸ್ಥಳಾವಕಾಶ ನೀಡಲು ನಿರ್ಧರಿಸಲಾಯಿತು.
ಸ್ಮಾರಕಕ್ಕೆ ಸ್ಥಳ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸರಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದ್ದು, ದೆಹಲಿಯ ನಿಗಮ್ ಬೋಧ ಘಾಟ್ ನಲ್ಲಿ ಬೆಳಗ್ಗೆ 11:45 ಕ್ಕೆ ಅವರ ಅಂತ್ಯಕ್ರಿಯೆ ನಡೆಯಲಿದೆ.