ಬೆಂಗಳೂರು: ರಾಜ್ಯದ ಕಾಂಗ್ರೆಸ್ ಘಟಕದ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ನಾಯಕರಿಗೆ ಬಿಟ್ಟಿದ್ದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಈಗಾಗಲೇ ಕೆಪಿಸಿಸಿ ಅಧ್ಯಕ್ಷರ ಅವಧಿ ಮುಕ್ತಾಯವಾಗಿದೆ. ಆದರೆ, ಈಗಲೂ ಹೈಕಮಾಂಡ್ ನಾಯಕರು ಅವರನ್ನೇ ಮುಂದುವರೆಸಿದ್ದಾರೆ. ಈಗ ಅವರ ಬದಲಾವಣೆ ಹೈಕಮಾಂಡ್ ನಾಯಕರೇ ನೋಡಿಕೊಳ್ಳಬೇಕು ಎಂದಿದ್ದಾರೆ.