ಆನೇಕಲ್: ಮಗುವಿಗೆ ದೃಷ್ಟಿ ತೆಗೆದ ನೀರನ್ನು ರಸ್ತೆಗೆ ಚೆಲ್ಲಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ(murder) ಅಂತ್ಯವಾಗಿರುವ ಘಟನೆ ನಡೆದಿದೆ.
ಈ ಘಟನೆ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ಸಮೀಪದ ದೊಡ್ಡಹಾಗಡೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಮಚಂದ್ರಪ್ಪ (45) ಸಾವನ್ನಪ್ಪಿರುವ (death)ವ್ಯಕ್ತಿ. ಕೊಲೆಯಾಗಿರುವ ರಾಮಚಂದ್ರಪ್ಪ ಮಗುವಿಗೆ ದೃಷ್ಟಿ ತೆಗೆದ ನೀರನ್ನು ರಸ್ತೆಗೆ ಚೆಲ್ಲಿದ್ದಕ್ಕೆ ಪಕ್ಕದ ಮನೆಯ ನಿವಾಸಿಗಳು ಜಗಳ ತೆಗೆದಿದ್ದಾರೆ. ಆಗ ಅಕ್ಕಪಕ್ಕದ ಮಹಿಳೆಯರು ಗುಂಪು ಕಟ್ಟಿಕೊಂಡು ಬಂದು ರಾಮಚಂದ್ರಪ್ಪ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ರಾಮಚಂದ್ರಪ್ಪ ಗಂಭೀರವಾಗಿ ಗಾಯಗೊಂಡು ನೆಲಕ್ಕೆ ಉರುಳಿ ಬಿದ್ದಿದ್ದ. ಕೂಡಲೇ ಅವರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ(hospital) ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಪೊಲೀಸರು(police) ತನಿಖೆ ನಡೆಸುತ್ತಿದ್ದಾರೆ.