ಬೆಂಗಳೂರು: ಸಿನಿಮಾ ಟಿಕೆಟ್ ದರಗಳನ್ನು ರಾಜ್ಯ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಕೂಡ ಮನಬಂದಂತೆ ವಿಧಿಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಟಿಕೆಟ್ ದರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.
ಈ ವಿಷಯವಾಗಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪಕ್ಕದ ರಾಜ್ಯಗಳಲ್ಲಿ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂಬ ಕುರಿತು ಪರಿಶೀಲನೆ ನಡೆಸಿ, ಅದಕ್ಕೆ ತಕ್ಕಂತೆ ಟಿಕೆಟ್ ದರಗಳನ್ನು ನಿಗದಿ ಪಡಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕನ್ನಡ ಸಿನಿಮಾಗಳನ್ನು ಬೆಳೆಸುವ ನಿಟ್ಟಿನಲ್ಲಿ 200 ಆಸನಗಳ ಮಿನಿ ಚಿತ್ರಮಂದಿರಗಳನ್ನು ರಾಜ್ಯದಾದ್ಯಂತ ಸ್ಥಾಪಿಸುವ ಯೋಜನೆ ಹೊಂದಿದ್ದು, ಅನುಷ್ಠಾನಕ್ಕೆ ಪ್ರಯತ್ನ ನಡೆಸಲಾಗುವುದು’ ಎಂದಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕುಮಾರ್ ಅವರನ್ನು ಹಾಡಿ ಹೊಗಳಿದ್ದಾರೆ.