ಬೆಂಗಳೂರು: ಬಾಣಂತಿಯರು ಹಾಗೂ ಶಿಶು ಮರಣ ಪ್ರಮಾಣ ವಿಚಾರವಾಗಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಮಧ್ಯೆ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಅಂಕಿ- ಅಂಶಗಳ ಮೂಲಕ ತಿರುಗೇಟು ನೀಡಿದೆ.
ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಸಾವನ್ನಪ್ಪಿದಂತೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಕೂಡ 6 ತಿಂಗಳಲ್ಲಿ 28 ಬಾಣಂತಿಯರು ಹಾಗೂ 322 ಶಿಶುಗಳ ಮರಣ ಸಂಭವಿಸಿದೆ ಎಂಬ ಅಂಕಿ – ಅಂಶಗಳನ್ನು ಮುಂದಿಟ್ಟುಕೊಂಡು ಸದನದಲ್ಲಿ ಬಿಜೆಪಿ ಪ್ರಸ್ತಾಪ ಮಾಡಿ ಆಕ್ರೋಶ ವ್ಯಕ್ತಪಡಿಸಿತ್ತು.
ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಬಾಣಂತಿಯರ ಸಾವು ಪ್ರಕರಣಗಳ ಹಿನ್ನೆಲೆಯಲ್ಲಿ ಸತ್ಯಾಂಶ ತಿಳಿಯಲು ಇಲ್ಲಿ ಬಂದಿದ್ದೇವೆ.
ಆಸ್ಪತ್ರೆ ಭೇಟಿಯಲ್ಲಿ ರಾಜಕಾರಣದ ಪ್ರಶ್ನೆ ಇಲ್ಲ. ಇವತ್ತು ಬಡವರಿಗೆ ಅನ್ಯಾಯ ಆಗುತ್ತಿದೆ. ಬಾಣಂತಿಯರು, ಹಸುಗೂಸುಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿಯಿಂದ ಬಾಣಂತಿಯರ ಸಾವಿನ ಬಗ್ಗೆ ಅಂಕಿ- ಅಂಶಗಳನ್ನು ಬಿಡುಗಡೆ ಮಾಡಲಾಯಿತು. ವರ್ಷದ ಲೆಕ್ಕಾಚಾರದಲ್ಲಿ ಅಂಕಿ- ಸಂಖ್ಯೆ ಬಿಡುಗಡೆ ಮಾಡಲಾಯಿತು.
2019 -20 – 662
2020-21 – 714
2021- 22 – 595
2022-23 – 527
2023-24 – 518
2024-25 ನವೆಂಬರ್ ರ ವರೆಗೆ 348 ಜನ ಬಾಣಂತಿಯರು ಸಾವನ್ನಪ್ಪಿದ್ದಾರೆ.