ಬೆಳಗಾವಿ: ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರೂ ಆರೋಪ ಮಾಡಿದ್ದರು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭದಲ್ಲಿ ಈ ಕುರಿತು ದೊಡ್ಡ ಚರ್ಚೆಯಾಗಿತ್ತು. ಹೀಗಾಗಿ ಸಿಎಂ ಅಧಿವೇಶನದಲ್ಲೇ ಅನುದಾನದ ವಾಗ್ದಾನ ಮಾಡಿದ್ದಾರೆ.
ಅಭಿವೃದ್ಧಿ ಕೆಲಸಗಳಿಗೆ ಹಣ ನೀಡುವಂತೆ ಕೇಳಿದ ಶಾಸಕರಿಗೆ 10 ಕೋಟಿಯಂತೆ ಸುಮಾರು 2000 ಕೋಟಿ ರೂ. ಅನುದಾನ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಈ ವೇಳೆ ಸಿಎಂ ಕೂಡ ಗರಂ ಆಗಿದ್ದರು. ಅಧಿವೇಶನದಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ. ವಕ್ಫ್ ಹಾಗೂ ಪಂಚಮಸಾಲಿ ಬಿಟ್ಟರೆ ವಿಪಕ್ಷಗಳಿಗೆ ಬೇರೆ ವಿಷಯ ಇಲ್ಲದಂತಾಗಿದೆ ಎಂದು ಗುಡುಗಿದರು. ದುಡ್ಡಿಲ್ಲ ದುಡ್ಡಿಲ್ಲ ಅಂತ ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಎಲ್ಲ ಶಾಸಕರಿಗೂ ಸುಮಾರು 2000 ಸಾವಿರ ಕೋಟಿ ರೂ. ಅನುದಾನ ಹಂಚಿಕೆಯಾಗುತ್ತದೆ ಎಂದು ಹೇಳಿದ್ದಾರೆ.