ಕೋಲಾರ : ಸುಳ್ಳಿನ ಕಂತೆಯ ಭರವಸೆ ಮೇಲೆ ಸರ್ಕಾರ ನಿಂತಿದೆ. ಸಿಎಂ ಸಿದ್ದರಾಮಯ್ಯ ಮಾತೆತ್ತಿದರೆ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ದೇಶದಲ್ಲಿ ಕೊಟ್ಟ ಮಾತಿನಂತೆ ನರೇಂದ್ರ ಮೋದಿ ಸರ್ಕಾರ ನಡೆದುಕೊಳ್ಳುತ್ತಿದೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಬಂಗಾರಪೇಟೆಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದ ಅಕ್ಕಿಗೆ ಸ್ಟಿಕ್ಕರ್ ಹಚ್ಚಿ ಕಾಂಗ್ರೆಸ್ ಸರ್ಕಾರ ಪ್ರಚಾರ ತೆಗೆದುಕೊಳ್ಳುತ್ತಿದೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಮಾಡಲು ಸರ್ಕಾರಕ್ಕೆ ಮನಸ್ಸಿಲ್ಲ. ಆಡಳಿತದ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಸರ್ಕಾರ, ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಠೇವಣಿ ಕಳೆದುಕೊಳ್ಳುತ್ತದೆ ಎನ್ನುವ ಭಯವಿದೆ. ಈ ಸರ್ಕಾರಕ್ಕೆ ಒಳಗಡೆ ಧಮ್ಮು ತಾಕತ್ತು ಇಲ್ಲ ಎಂದು ಕಿಡಿ ಕಾರಿದ್ದಾರೆ.



















