ಉತ್ತರಾಖಂಡದ ರುದ್ರ ಪ್ರಯಾಗ್ ನಲ್ಲಿ ನಿಯಂತ್ರಣ ತ್ಪಪಿದ ಹೆಲಿಕಾಪ್ಟರ್ ವೊಂದು ತುರ್ತಾಗಿ ಲ್ಯಾಂಡ್ ಆಗಿದೆ. ರೋಡ್ ನಲ್ಲಿ ಹೋಗುತ್ತಿದ್ದ ಕಾರಿನ ಮೇಲೆಯೇ ಕಾಪ್ಟರ್ ಇಳಿದಿದ್ದು, ಹಿಂಬದಿಯ ಭಾಗ ಜಖಂಗೊಂಡಿದೆ. ಹೆಲಿಕಾಪ್ಟರ್ ಲ್ಯಾಂಡ್ ಆದ ತೀವ್ರತೆಗೆ ಕಾರು ಕೂಡ ನಜ್ಜುಗುಜ್ಜಾಗಿದೆ.
ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದವರು ಹಾಗೂ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಲಿಕಾಪ್ಟರ್ ಪೈಲಟ್ ಮಾತ್ರ ಸಣ್ಣ-ಪುಟ್ಟ ಗಾಯಗಳೊಂದಿಗೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.