ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಕ್ರಮದ ವಿರುದ್ಧ ಸಿಎಂ ಸಿದ್ದರಾಮಯ್ಯ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಸೆಪ್ಟೆಂಬರ್ 12 ರಂದೇ ವಿಚಾರಣೆ ಮುಗಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಹೀಗಾಗಿ ಸಿಎಂಗೆ ಟೆನ್ಶನ್ ಶುರುವಾಗಿದೆ.
ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ವಿಶೇಷ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಸರ್ಕಾರದ ಪರ ವಾದಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, 22 ವರ್ಷಕ್ಕಿಂತ ಹಿಂದಿನ ಕೇಸ್ ಇದು. ಹೀಗಾಗಿ ಇದಕ್ಕೆ ಪ್ರಾಥಮಿಕ ತನಿಖೆಯ ಅಗತ್ಯವಿದೆ ಎಂದು ವಾದಿಸಿದರು.
ಅಲ್ಲದೇ, ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಉತ್ತರಿಸಲು ಸಮಯ ಕೇಳಿದರು. ಹೀಗಾಗಿ ಕೋರ್ಟ್ ಸೆ. 12ಕ್ಕೆ ವಿಚಾರಣೆ ಮುಂದೂಡಿದರು. ಅಂದೇ ಅಂದೇ ವಿಚಾರಣೆ ಮುಕ್ತಾಯಗೊಳಿಸಲಾಗುವುದು ಎಂದು ನ್ಯಾಯಪೀಠ ಹೇಳಿತು. ಅಲ್ಲದೆ, ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದೆಂಬ ಮಧ್ಯಂತರ ಆದೇಶ ನೀಡಿತು.
ದೂರುದಾರರ ಪೈಕಿ ಒಬ್ಬರಾದ ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್, ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಈ ಎಲ್ಲಾ ಚಟುವಟಿಕೆ ನಡೆದಿವೆ ಎಂದು ವಾದಿಸಿದರು. ಹೀಗಾಗಿ ಸದ್ಯ ಸೆ. 12ರ ವರೆಗೆ ಸಿಎಂಗೆ ಟೆನ್ಶನ್ ಶುರುವಾಗಿದ್ದು, ಕೋರ್ಟ್ ಏನು ಹೇಳಬಹುದು ಎಂಬ ಆತಂಕದಲ್ಲಿದ್ದಾರೆ.